7 ಆದ್ದರಿಂದ ಅಹಾಬನು ತನ್ನ ರಾಜ್ಯದ ಹಿರಿಯರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ಹದದನು ಕೇಡುಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದೆನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅಪೇಕ್ಷೆಪಟ್ಟಿದ್ದಾನೆ” ಎಂದು ಹೇಳಿದನು.
7 ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.
7 ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.
7 ಆಗ ಇಸ್ರಾಯೇಲ್ಯರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರಿಸಿ ಅವರಿಗೆ - ನೋಡಿದಿರಾ, ಅವನು ನಮಗೆ ಕೇಡು ಬಗೆಯುತ್ತಾನೆ; ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು ಎಂದು ಅವನು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ ಎಂದು ಹೇಳಲು
7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.
ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.
ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.
ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ’” ಎಂದು ಹೇಳಿದರು.
ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.