1 ಅರಸುಗಳು 21:10 - ಪರಿಶುದ್ದ ಬೈಬಲ್10 ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿ |
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.