1 ಅರಸುಗಳು 21:11 - ಪರಿಶುದ್ದ ಬೈಬಲ್11 ಇಜ್ರೇಲಿನ ಹಿರಿಯರು ಮತ್ತು ಪ್ರಮುಖರಾದ ಜನರು ಆ ಆಜ್ಞೆಗನುಸಾರವಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನ ಊರಿನ ಹಿರಿಯರೂ ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಅವನ ಪಟ್ಟಣದ ಮನುಷ್ಯರೂ, ಅವನ ಪಟ್ಟಣದ ನಿವಾಸಿಗಳೂ ಆದ ಹಿರಿಯರೂ, ಗೌರವಸ್ಥರೂ, ಈಜೆಬೆಲಳು ಅವರಿಗೆ ಕಳುಹಿಸಿದ ಪ್ರಕಾರವೂ, ಅವಳು ಅವರ ಬಳಿಗೆ ಕಳುಹಿಸಿದ ಪತ್ರಗಳಲ್ಲಿ ಬರೆದ ಪ್ರಕಾರವೂ ಮಾಡಿದರು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”