1 ಅರಸುಗಳು 21:13 - ಪರಿಶುದ್ದ ಬೈಬಲ್13 ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.