1 ಅರಸುಗಳು 21:15 - ಪರಿಶುದ್ದ ಬೈಬಲ್15 ಇದನ್ನು ಕೇಳಿದ ಈಜೆಬೆಲಳು ಅಹಾಬನಿಗೆ, “ನಾಬೋತನು ಸತ್ತುಹೋದನು. ಈಗ ನೀನು ಹೋಗಿ, ನಿನಗೆ ಇಷ್ಟವಾದ ಆ ದ್ರಾಕ್ಷಿತೋಟವನ್ನು ತೆಗೆದುಕೊ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಕೆಯು ಇದನ್ನು ಕೇಳಿ ಅಹಾಬನಿಗೆ - ನೀನು ಹೋಗಿ ನಾಬೋತನು ಮಾರುವದಿಲ್ಲವೆಂದು ಹೇಳಿದ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೋ; ಅವನು ಜೀವದಿಂದಿಲ್ಲ, ಸತ್ತನು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾಬೋತನು ಕಲ್ಲೆಸೆತದಿಂದ ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ, ಅವಳು ಅಹಾಬನಿಗೆ, “ನೀನೆದ್ದು ಇಜ್ರೆಯೇಲಿನವನಾದ ನಾಬೋತನು ಕ್ರಯಕ್ಕೆ ಕೊಡಲು ಸಮ್ಮತಿಸದಿದ್ದ ದ್ರಾಕ್ಷಿತೋಟವನ್ನು ಸ್ವಾಧೀನ ಮಾಡಿಕೋ. ಏಕೆಂದರೆ ನಾಬೋತನು ಜೀವದಿಂದಿಲ್ಲ, ಸತ್ತಿದ್ದಾನೆ,” ಎಂದಳು. ಅಧ್ಯಾಯವನ್ನು ನೋಡಿ |