18 “ಸಮಾರ್ಯದಲ್ಲಿ ಆಳುತ್ತಿರುವ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ಹೋಗು. ಅಹಾಬನು ಈಗ ನಾಬೋತನ ದ್ರಾಕ್ಷಿತೋಟದಲ್ಲಿದ್ದಾನೆ. ಆ ತೋಟವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅವನು ಅಲ್ಲಿಗೆ ಹೋಗಿದ್ದಾನೆ.
18 ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
18 ಆತನು ಅವನಿಗೆ - ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೊಳ್ಳುವದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
18 “ನೀನೆದ್ದು ಸಮಾರ್ಯದಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆ ಎದುರಾಗಿ ಹೋಗು. ಅವನು ನಾಬೋತನ ದ್ರಾಕ್ಷಿ ತೋಟದಲ್ಲಿದ್ದಾನೆ. ಅದನ್ನು ಸ್ವಾಧೀನಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.
ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತಸ್ಥಳಗಳ ವಿರುದ್ಧವಾಗಿಯೂ ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.
ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು.