1 ಅರಸುಗಳು 21:20 - ಪರಿಶುದ್ದ ಬೈಬಲ್20 ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ, ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.