Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:21 - ಪರಿಶುದ್ದ ಬೈಬಲ್‌

21 ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸರನ್ನು ನಾನು ಕೊಂದುಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ನಿನ್ನನ್ನು ಕುರಿತು - ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:21
15 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.


ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.


ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.


ಇಸ್ರೇಲರ ದೇವರಾದ ಯೆಹೋವನಾಣೆ, ನೀನು ನನ್ನನ್ನು ಸಂಧಿಸಲು ಬೇಗನೆ ಬರದಿದ್ದರೆ ನಾಳೆ ಹೊತ್ತಾರೆಯ ವೇಳೆಗೆ ನಾಬಾಲನ ಕುಟುಂಬದಲ್ಲಿ ಒಬ್ಬನೂ ಜೀವಸಹಿತ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.


ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಆದ್ದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.


ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.


ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು