1 ಅರಸುಗಳು 21:22 - ಪರಿಶುದ್ದ ಬೈಬಲ್22 ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿ ನನಗೆ ಕೋಪವನ್ನೆಬ್ಬಿಸಿದದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವದು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’ ಅಧ್ಯಾಯವನ್ನು ನೋಡಿ |