1 ಅರಸುಗಳು 21:25 - ಪರಿಶುದ್ದ ಬೈಬಲ್25 ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ. ಅಧ್ಯಾಯವನ್ನು ನೋಡಿ |
ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.