1 ಅರಸುಗಳು 21:26 - ಪರಿಶುದ್ದ ಬೈಬಲ್26 ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರಿಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು. ಅಧ್ಯಾಯವನ್ನು ನೋಡಿ |
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”