1 ಅರಸುಗಳು 21:29 - ಪರಿಶುದ್ದ ಬೈಬಲ್29 “ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”