1 ಅರಸುಗಳು 21:3 - ಪರಿಶುದ್ದ ಬೈಬಲ್3 ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು. ಅಧ್ಯಾಯವನ್ನು ನೋಡಿ |
ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.