1 ಅರಸುಗಳು 21:5 - ಪರಿಶುದ್ದ ಬೈಬಲ್5 ಅಹಾಬನ ಪತ್ನಿಯಾದ ಈಜೆಬೆಲಳು ಅವನ ಹತ್ತಿರ ಹೋದಳು. ಈಜೆಬೆಲಳು, “ನೀನೇಕೆ ತಳಮಳಗೊಂಡಿರುವೆ? ನೀನು ಏಕೆ ಊಟಮಾಡಲಿಲ್ಲ?” ಎಂದು ಅವನನ್ನು ಕೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು - ನೀನು ಯಾಕೆ ಊಟಮಾಡುವದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ ಎಂದು ಕೇಳಲು ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ, “ನೀನು ವ್ಯಸನವಾಗಿರುವುದೇಕೆ? ಯಾಕೆ ಊಟಮಾಡುವುದಿಲ್ಲ?” ಎಂದಳು. ಅಧ್ಯಾಯವನ್ನು ನೋಡಿ |
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)