Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:7 - ಪರಿಶುದ್ದ ಬೈಬಲ್‌

7 ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:7
14 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಆಜ್ಞೆಗಳನ್ನು ಕೊಡಲು ರಾಜನಿಗೆ ಅಧಿಕಾರವಿದೆ. ಅವನನ್ನು ಬಲವಂತ ಮಾಡಲು ಯಾರಿಗೂ ಸಾಧ್ಯವಿಲ್ಲ.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ.


ಯೋನಾದಾಬನು ಅಮ್ನೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ, ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು. ಅಮ್ನೋನನು ಯೋನಾದಾಬನಿಗೆ, “ನಾನು ತಾಮಾರಳನ್ನು ಮೋಹಿಸಿದ್ದೇನೆ. ಆದರೆ ಅವಳು ನನ್ನ ಸೋದರನಾದ ಅಬ್ಷಾಲೋಮನ ತಂಗಿ” ಎಂದು ಹೇಳಿದನು.


“ನಿಮಗೆ ಸೇರಿದ ಉತ್ತಮ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಆಲಿವ್ ತೋಪುಗಳನ್ನೂ ರಾಜನು ಕಿತ್ತುಕೊಂಡು ತನ್ನ ಅಧಿಕಾರಿಗಳಿಗೆ ಕೊಡುತ್ತಾನೆ.


ಆದ್ದರಿಂದ ಇಸ್ರೇಲರ ಹಿರಿಯರೆಲ್ಲ ಒಟ್ಟುಗೂಡಿದರು. ಅವರು ಸಮುವೇಲನನ್ನು ಭೇಟಿಮಾಡಲು ರಾಮಕ್ಕೆ ಹೋದರು.


ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.


ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.


ಅಹಾಬನು, “ನಾನು ಇಜ್ರೇಲಿನ ನಾಬೋತನಿಗೆ, ‘ನಿನ್ನ ತೋಟವನ್ನು ನನಗೆ ಕೊಡು. ಅದರ ಪೂರ್ಣ ಬೆಲೆಯನ್ನು ನಿನಗೆ ಕೊಡುತ್ತೇನೆ ಅಥವಾ ನೀನು ಬಯಸಿದರೆ, ನಿನಗೆ ಬೇರೊಂದು ತೋಟವನ್ನು ಕೊಡುತ್ತೇನೆ’ ಎಂದು ಹೇಳಿದೆನು. ಆದರೆ ನಾಬೋತನು ತನ್ನ ತೋಟವನ್ನು ನನಗೆ ಕೊಡಲಿಲ್ಲ” ಎಂದು ಉತ್ತರಿಸಿದನು.


ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು