Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:11 - ಪರಿಶುದ್ದ ಬೈಬಲ್‌

11 ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:11
20 ತಿಳಿವುಗಳ ಹೋಲಿಕೆ  

ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.


ಯೆಹೋವನು ನನಗೆ ಹೀಗೆ ಹೇಳಿದನು: “ನೀನು ಮರದ ಕಂಬದಿಂದ ಕೆಲವು ನೊಗಗಳನ್ನು ಮಾಡಿ ನಿನ್ನ ಕತ್ತಿನ ಹಿಂಬದಿಯ ಮೇಲೆ ಇಟ್ಟುಕೋ.


ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.


“ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.


ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.


ಇತರ ಪ್ರವಾದಿಗಳೆಲ್ಲರೂ ಚಿದ್ಕೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಟದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು.


ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು.


ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು