16 ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.
ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.
ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.
ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.
ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.
ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.
ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.
ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.