18 ಆಗ ಅಹಾಬನು ಯೆಹೋಷಾಫಾಟನಿಗೆ, “ನೋಡಿದೆಯಾ! ನಾನು ನಿನಗೆ ಹೇಳಿದೆನಲ್ಲಾ! ಈ ಪ್ರವಾದಿಯು ಎಂದೂ ನನ್ನ ಬಗ್ಗೆ ಒಳ್ಳೆಯದೇನನ್ನೂ ಹೇಳುವುದಿಲ್ಲ. ನಾನು ಕೇಳಬಾರದ ಸಂಗತಿಗಳನ್ನು ಅವನು ಯಾವಾಗಲೂ ನನಗೆ ಹೇಳುತ್ತಾನೆ” ಎಂದು ಹೇಳಿದನು.
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.