Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:21 - ಪರಿಶುದ್ದ ಬೈಬಲ್‌

21 ಆಗ ಒಬ್ಬ ದೂತನು ಯೆಹೋವನ ಬಳಿಗೆ ಹೋಗಿ, ‘ನಾನು ಅವನನ್ನು ಪ್ರೇರೇಪಿಸುತ್ತೇನೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಡೆಗೆ ಒಂದು ಆತ್ಮವು ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರಿಸುವೆನು,’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ - ನಾನು ಹೋಗಿ ಅವನನ್ನು ಪ್ರೇರಿಸುವೆನು ಅಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:21
7 ತಿಳಿವುಗಳ ಹೋಲಿಕೆ  

ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.


ಮೀಕಾಯೆಹು ಹೀಗೆ ಹೇಳಿದ ಮೇಲೆ, “ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.


ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.


ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.


ಅದಕ್ಕೆ ಆತ್ಮವು, ‘ನಾನು ಹೋಗಿ ಅಹಾಬನ ಪ್ರವಾದಿಗಳಿಗೆ ಸುಳ್ಳುಹೇಳುವ ಆತ್ಮವಾಗುತ್ತೇನೆ’ ಎಂದು ಹೇಳಿತು. ಅದಕ್ಕೆ ಆತನು ‘ಸರಿ, ಹಾಗೆಯೇ ಮಾಡು. ನೀನು ನಿನ್ನ ಕಾರ್ಯದಲ್ಲಿ ಸಫಲವಾಗುವೆ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು