1 ಅರಸುಗಳು 22:25 - ಪರಿಶುದ್ದ ಬೈಬಲ್25 ಮೀಕಾಯೆಹು, “ಕೇಡು ಬೇಗನೆ ಬರಲಿದೆ. ಆಗ ನೀನು ಹೋಗಿ ಒಂದು ಚಿಕ್ಕ ಕೊಠಡಿಯಲ್ಲಿ ಅಡಗಿಕೊಳ್ಳುವೆ. ನಾನು ಸತ್ಯವನ್ನೇ ನುಡಿದೆನೆಂದು ಆಗ ನಿನಗೆ ತಿಳಿಯುತ್ತದೆ!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”