Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:30 - ಪರಿಶುದ್ದ ಬೈಬಲ್‌

30 ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ;” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ನಾನು ವೇಷಹಾಕಿಸಿಕೊಂಡು ರಣರಂಗಕ್ಕೆ ಬರುವೆನು; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:30
10 ತಿಳಿವುಗಳ ಹೋಲಿಕೆ  

ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು.


ಆ ಸಮಯದಲ್ಲಿ ಈ ಇಬ್ಬರು ರಾಜರು ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಬಳಿಯಲ್ಲಿದ್ದ ಸಿಂಹಾಸನಗಳ ಮೇಲೆ ಅವರು ಕುಳಿತಿದ್ದರು. ಅವರ ಎದುರಿನಲ್ಲಿ ಪ್ರವಾದಿಗಳೆಲ್ಲರೂ ನಿಂತಿದ್ದರು. ಪ್ರವಾದಿಗಳು ಪ್ರವಾದಿಸುತ್ತಿದ್ದರು.


ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಆ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.


ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.


ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು