1 ಅರಸುಗಳು 22:33 - ಪರಿಶುದ್ದ ಬೈಬಲ್33 ಅವನು ರಾಜನಾದ ಅಹಾಬನಲ್ಲವೆಂಬುದನ್ನು ಆ ಅಧಿಕಾರಿಗಳು ತಿಳಿದು ಅವನನ್ನು ಕೊಲ್ಲಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನು ಕೂಗಿಕೊಂಡನು. ಆಗ ಇವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾಯಿತು. ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನು ಕೂಗಿಕೊಂಡನು; ಆಗ ಇವನು ಇಸ್ರಾಯೇಲ್ಯರ ಅರಸನಲ್ಲವೆಂಬದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿ |
ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.