1 ಅರಸುಗಳು 22:35 - ಪರಿಶುದ್ದ ಬೈಬಲ್35 ಸೈನಿಕರು ಹೋರಾಡುತ್ತಲೇ ಇದ್ದರು. ರಾಜನಾದ ಅಹಾಬನು ರಥದಲ್ಲಿಯೇ ಇದ್ದನು. ಅವನು ರಥದ ಒಂದು ಪಕ್ಕಕ್ಕೆ ಒರಗಿಕೊಂಡು ನಿಂತಿದ್ದನು. ಅವನು ಅರಾಮ್ಯರ ಸೇನೆಯ ಕಡೆಗೆ ನೋಡುತ್ತಲೇ ಇದ್ದನು. ಅವನ ದೇಹದಿಂದ ಹರಿದ ರಕ್ತವು, ರಥದ ತಳದಲ್ಲಿ ಮಡುಗಟ್ಟಿತು. ಸಾಯಂಕಾಲವಾದ ಮೇಲೆ ರಾಜನು ಸತ್ತುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಅರಸನು ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡು ನಿಲ್ಲಬೇಕಾಯಿತು. ಸಾಯಂಕಾಲವಾದಾಗ ಅವನು ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆದರೂ ಆ ದಿವಸ ಯುದ್ಧವು ಬಹುಘೋರವಾಗಿದ್ದದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು. ಅಧ್ಯಾಯವನ್ನು ನೋಡಿ |
ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.