1 ಅರಸುಗಳು 22:36 - ಪರಿಶುದ್ದ ಬೈಬಲ್36 ಸೂರ್ಯನು ಮುಳುಗುತ್ತಿರಲು, ಇಸ್ರೇಲಿನ ಸೈನ್ಯದ ಪ್ರತಿಯೊಬ್ಬನು ತನ್ನ ಊರಿಗೂ ತನ್ನ ನಾಡಿಗೂ ಹೋಗಬೇಕು! ಎಂಬ ಕೂಗು ಸೈನ್ಯದಲ್ಲೆಲ್ಲಾ (ಪಾಳೆಯದಲ್ಲಿ) ಹಬ್ಬಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಸೂರ್ಯಾಸ್ತಮಾನವಾದ ಕೂಡಲೆ - ಪ್ರತಿಯೊಬ್ಬನು ತನ್ನ ಪ್ರಾಂತಕ್ಕೂ ಪಟ್ಟಣಕ್ಕೂ ಹೋಗಲಿ ಎಂಬ ಕೂಗು ಇಸ್ರಾಯೇಲ್‍ಸೈನ್ಯದಲ್ಲಿ ಹಬ್ಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು. ಅಧ್ಯಾಯವನ್ನು ನೋಡಿ |
ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.
ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.