1 ಅರಸುಗಳು 22:38 - ಪರಿಶುದ್ದ ಬೈಬಲ್38 ಆ ಜನರು ಅಹಾಬನ ರಥವನ್ನು ಸಮಾರ್ಯದ ಕೊಳದ ನೀರಿನಲ್ಲಿ ತೊಳೆದರು. ರಥದಲ್ಲಿದ್ದ ರಾಜನಾದ ಅಹಾಬನ ರಕ್ತವನ್ನು ನಾಯಿಗಳು ನೆಕ್ಕಿದವು. ದೇವದಾಸಿಯರು ಆ ಕೊಳದ ನೀರನ್ನು ಸ್ನಾನಕ್ಕೆ ಉಪಯೋಗಿಸುತ್ತಿದ್ದರು. ಯೆಹೋವನು ಹೇಳಿದ್ದ ರೀತಿಯಲ್ಲಿಯೇ ಈ ಸಂಗತಿಗಳು ಸಂಭವಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ವೇಶ್ಯೆಯರು ಸ್ನಾನಮಾಡುವ ಸಮಾರಿಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ, ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು, ಹೀಗೆ ಸರ್ವೇಶ್ವರ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು; ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು. ಅಧ್ಯಾಯವನ್ನು ನೋಡಿ |