Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:40 - ಪರಿಶುದ್ದ ಬೈಬಲ್‌

40 ಅಹಾಬನು ಸತ್ತಾಗ ಅವನನ್ನು ಅವನ ಪೂರ್ವಿಕರೊಡನೆ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅಹಾಬನು ಸತ್ತು ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಅಹಜ್ಯ ಎಂಬವನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅಹಾಬನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬವನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅಹಾಬನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:40
13 ತಿಳಿವುಗಳ ಹೋಲಿಕೆ  

ಕೆಲಕಾಲದ ನಂತರ ಯೆಹೋಷಾಫಾಟನು ಇಸ್ರೇಲರ ರಾಜನಾಗಿದ್ದ ಅಹಜ್ಯನೊಂದಿಗೆ ಒಪ್ಪಂದವನ್ನು ಮಾಡಿಕೊಂಡನು. ಅಹಜ್ಯನು ದೇವರ ದೃಷ್ಟಿಯಲ್ಲಿ ಬಹು ದುಷ್ಟನಾಗಿದ್ದನು.


ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾಮನು ಆಳುವುದಕ್ಕೆ ಆರಂಭಿಸಿದನು.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಅಹಜ್ಯನು ಅಹಾಬನ ಮಗ. ಯೆಹೋಷಾಫಾಟನು ಯೆಹೂದದ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಅವನು ಇಸ್ರೇಲಿನ ರಾಜನಾದನು. ಅಹಜ್ಯನು ಸಮಾರ್ಯದಲ್ಲಿ ಎರಡು ವರ್ಷ ರಾಜ್ಯವಾಳಿದನು.


ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.


ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದ್ದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.


ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಆ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಆ ಪುಸ್ತಕವು ತಿಳಿಸುತ್ತದೆ.


ಅಹಾಬನು ಇಸ್ರೇಲಿನ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಯೆಹೋಷಾಫಾಟನು ಯೆಹೂದದ ರಾಜನಾದನು. ಯೆಹೋಷಾಫಾಟನು ಆಸನ ಮಗ.


ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.


ಅಹಜ್ಯನು ಯೆಹೋವನ ವಿರುದ್ಧ ಪಾಪವನ್ನು ಮಾಡಿದನು. ಅವನು ತನ್ನ ತಂದೆಯಾದ ಅಹಾಬ, ತಾಯಿಯಾದ ಈಜೆಬೆಲ ಮತ್ತು ನೆಬಾಟನ ಮಗನಾದ ಯಾರೊಬ್ಬಾಮ ಮಾಡಿದಂತಹ ಕಾರ್ಯಗಳನ್ನೇ ಮಾಡಿದನು. ಈ ಆಡಳಿತಗಾರರೆಲ್ಲ ಇಸ್ರೇಲಿನ ಜನರನ್ನು ಮತ್ತಷ್ಟು ಪಾಪಕ್ಕೆ ನಡೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು