Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:41 - ಪರಿಶುದ್ದ ಬೈಬಲ್‌

41 ಅಹಾಬನು ಇಸ್ರೇಲಿನ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಯೆಹೋಷಾಫಾಟನು ಯೆಹೂದದ ರಾಜನಾದನು. ಯೆಹೋಷಾಫಾಟನು ಆಸನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಇಸ್ರಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಇಸ್ರಾಯೇಲ್ಯರ ಅರಸನಾದ ಅಹಾಬನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:41
7 ತಿಳಿವುಗಳ ಹೋಲಿಕೆ  

ಯೆಹೂದ ದೇಶವನ್ನು ಯೆಹೋಷಾಫಾಟನು ಆಳಿದನು. ಅವನು ಪಟ್ಟವನ್ನೇರಿದಾಗ ಮೂವತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಅಜೂಬ. ಆಕೆ ಶಿಲ್ಹಿ ಎಂಬಾತನ ಮಗಳು.


ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.


ಸೊಲೊಮೋನನ ಮಗನು ರೆಹಬ್ಬಾಮ. ರೆಹಬ್ಬಾಮನ ಮಗನು ಅಬೀಯ. ಅಬೀಯನ ಮಗನು ಆಸ. ಆಸನ ಮಗನು ಯೆಹೋಷಾಫಾಟ್.


ಮೂರನೆಯ ವರ್ಷದಲ್ಲಿ ಯೆಹೂದದ ರಾಜನಾದ ಯೆಹೋಷಾಫಾಟನು ಇಸ್ರೇಲಿನ ರಾಜನಾದ ಅಹಾಬನನ್ನು ಭೇಟಿಮಾಡಲು ಹೋದನು.


ಆಸನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಆಸನ ಮಗನಾದ ಯೆಹೋಷಾಫಾಟನು ಅವನ ನಂತರ ಹೊಸ ರಾಜನಾದನು.


ಅಹಾಬನು ಸತ್ತಾಗ ಅವನನ್ನು ಅವನ ಪೂರ್ವಿಕರೊಡನೆ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ರಾಜನಾದನು.


ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನ ತಾಯಿಯು ಆಜೂಬಳೆಂಬ ಹೆಸರಿನವಳು. ಆಜೂಬಳು ಶಿಲ್ಹಿಯ ಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು