1 ಅರಸುಗಳು 22:42 - ಪರಿಶುದ್ದ ಬೈಬಲ್42 ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನ ತಾಯಿಯು ಆಜೂಬಳೆಂಬ ಹೆಸರಿನವಳು. ಆಜೂಬಳು ಶಿಲ್ಹಿಯ ಮಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿ ಇದ್ದನು. ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬ ಆಕೆ ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅವನು ಅರಸನಾದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೈದು ವರುಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.