Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:47 - ಪರಿಶುದ್ದ ಬೈಬಲ್‌

47 ಈ ಸಮಯದಲ್ಲಿ ಎದೋಮ್ ದೇಶದಲ್ಲಿ ರಾಜನಿರಲಿಲ್ಲ. ಆ ದೇಶವನ್ನು ಒಬ್ಬ ರಾಜ್ಯಪಾಲನು ಆಳುತ್ತಿದ್ದನು. ಈ ರಾಜ್ಯಪಾಲನನ್ನು ಯೆಹೂದದ ರಾಜನು ಆರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:47
8 ತಿಳಿವುಗಳ ಹೋಲಿಕೆ  

ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದದ ಆಳ್ವಿಕೆಗೆ ವಿರುದ್ಧವಾಗಿ ದಂಗೆ ಎದ್ದರು. ಎದೋಮ್ಯರು ತಮ್ಮಲ್ಲೇ ಒಬ್ಬ ರಾಜನನ್ನು ಆರಿಸಿಕೊಂಡಿದ್ದರು.


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು