1 ಅರಸುಗಳು 22:6 - ಪರಿಶುದ್ದ ಬೈಬಲ್6 ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು.