ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಈ ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೇ ತಮ್ಮನ್ನು ಕಾಪಾಡಬೇಕು ಎಂಬುದು ಅವರ ಇಷ್ಟ.