1 ಅರಸುಗಳು 22:8 - ಪರಿಶುದ್ದ ಬೈಬಲ್8 ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)