Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:14 - ಪರಿಶುದ್ದ ಬೈಬಲ್‌

14 ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ದೀರ್ಘಾಯುಷ್ಯವನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:14
25 ತಿಳಿವುಗಳ ಹೋಲಿಕೆ  

ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.


ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.


ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.


ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು.


ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.


ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ.


ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.


ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”


ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನಿಗೆ ಸರಿಯಾಗಿ ನಡೆದುಕೊಂಡನು. ಅವನು ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.


ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.


ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಆದ್ದರಿಂದ ನಾನು ಸೊಲೊಮೋನನ ಕುಟುಂಬದಿಂದ ರಾಜ್ಯವನ್ನು ತೆಗೆದುಕೊಳ್ಳುತ್ತೇನೆ. ಆದರೆ ಸೊಲೊಮೋನನು ತನ್ನ ಜೀವಮಾನವೆಲ್ಲಾ ಆಳುವಂತೆ ನಾನು ಅವನಿಗೆ ಅವಕಾಶ ಕೊಡುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗಾಗಿ ಇದನ್ನು ಮಾಡುತ್ತೇನೆ. ನಾನು ದಾವೀದನನ್ನು ಆರಿಸಿಕೊಂಡೆನು; ಏಕೆಂದರೆ ಅವನು ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಅನುಸರಿಸಿದನು.


ಸೊಲೊಮೋನನು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯನಾಗಿದ್ದಾನೆ. ಅವನು ಹೀಗೆಯೇ ಮುಂದುವರಿದರೆ ನಾನು ಅವನ ರಾಜ್ಯವನ್ನು ಶಾಶ್ವತವಾಗಿ ಬಲಗೊಳಿಸುವೆನು’” ಎಂದು ಹೇಳಿದನು.


ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು