1 ಅರಸುಗಳು 3:15 - ಪರಿಶುದ್ದ ಬೈಬಲ್15 ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇವಿುಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿ ತನ್ನ ಎಲ್ಲಾ ಸೇವಕರಿಗೋಸ್ಕರ ಔತಣಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!