1 ಅರಸುಗಳು 3:16 - ಪರಿಶುದ್ದ ಬೈಬಲ್16 ಒಂದು ದಿನ ಇಬ್ಬರು ವೇಶ್ಯೆಯರು ಸೊಲೊಮೋನನ ಹತ್ತಿರಕ್ಕೆ ಬಂದರು. ಅವರು ರಾಜನ ಎದುರಿನಲ್ಲಿ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಂದು ದಿನ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದೇ ಕಾಲದಲ್ಲಿ ಇಬ್ಬರು ಸೂಳೆಯರು ಅರಸನ ಸನ್ನಿಧಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇಬ್ಬರು ವೇಶ್ಯೆಯರು ಅರಸನ ಬಳಿಗೆ ಬಂದು, ಅವನ ಮುಂದೆ ನಿಂತರು. ಅಧ್ಯಾಯವನ್ನು ನೋಡಿ |
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”
ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.