1 ಅರಸುಗಳು 3:20 - ಪರಿಶುದ್ದ ಬೈಬಲ್20 ಅಂದು ರಾತ್ರಿ ನಾನು ಗಾಢನಿದ್ರೆಯಲ್ಲಿರುವಾಗ ಈಕೆಯು ನನ್ನ ಹಾಸಿಗೆಯಿಂದ ನನ್ನ ಮಗುವನ್ನು ತೆಗೆದುಕೊಂಡು ತನ್ನ ಹಾಸಿಗೆಗೆ ಹೋದಳು; ತನ್ನ ಸತ್ತ ಮಗುವನ್ನು ನನ್ನ ಹಾಸಿಗೆಯಲ್ಲಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮಧ್ಯರಾತ್ರಿಯಲ್ಲಿ ಇವಳೆದ್ದು, ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ, ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿ ಇಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮಧ್ಯರಾತ್ರಿಯಲ್ಲಿ ಇವಳೆದ್ದು ನಿನ್ನ ದಾಸಿಯಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು. ಅಧ್ಯಾಯವನ್ನು ನೋಡಿ |