Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:21 - ಪರಿಶುದ್ದ ಬೈಬಲ್‌

21 ಮುಂಜಾನೆ ನಾನು ಎಚ್ಚರಗೊಂಡು ನನ್ನ ಮಗುವಿಗೆ ಹಾಲು ಕುಡಿಸಲು ಸಿದ್ಧಳಾದಾಗ ಮಗು ಸತ್ತುಹೋಗಿರುವುದನ್ನು ಕಂಡೆನು. ಆ ಮಗುವನ್ನು ನಾನು ಸೂಕ್ಷ್ಮವಾಗಿ ನೋಡಿದಾಗ ಆ ಮಗು ನನ್ನದಲ್ಲವೆಂಬುದು ನನಗೆ ತಿಳಿಯಿತು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಬೆಳಿಗ್ಗೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆ ಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:21
5 ತಿಳಿವುಗಳ ಹೋಲಿಕೆ  

ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.


ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.


ಅಂದು ರಾತ್ರಿ ನಾನು ಗಾಢನಿದ್ರೆಯಲ್ಲಿರುವಾಗ ಈಕೆಯು ನನ್ನ ಹಾಸಿಗೆಯಿಂದ ನನ್ನ ಮಗುವನ್ನು ತೆಗೆದುಕೊಂಡು ತನ್ನ ಹಾಸಿಗೆಗೆ ಹೋದಳು; ತನ್ನ ಸತ್ತ ಮಗುವನ್ನು ನನ್ನ ಹಾಸಿಗೆಯಲ್ಲಿಟ್ಟಳು.


ಆದರೆ ಇನ್ನೊಬ್ಬ ಸ್ತ್ರೀಯು, “ಇಲ್ಲ! ಜೀವಂತವಾಗಿರುವ ಮಗು ನನ್ನದು. ಸತ್ತಿರುವ ಮಗು ನಿನ್ನದು!” ಎಂದು ಹೇಳಿದಳು. ಆದರೆ ಮೊದಲನೆಯ ಸ್ತ್ರೀಯು, “ಇಲ್ಲ! ನೀನು ಸುಳ್ಳು ಹೇಳುತ್ತಿರುವೆ! ಸತ್ತಿರುವ ಮಗು ನಿನ್ನದು. ಜೀವಂತವಾಗಿರುವ ಮಗು ನನ್ನದು!” ಎಂದು ಹೇಳಿದಳು. ಹೀಗೆ ಆ ಇಬ್ಬರು ಸ್ತ್ರೀಯರು ರಾಜನ ಎದುರಿನಲ್ಲಿ ವಾದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು