Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:22 - ಪರಿಶುದ್ದ ಬೈಬಲ್‌

22 ಆದರೆ ಇನ್ನೊಬ್ಬ ಸ್ತ್ರೀಯು, “ಇಲ್ಲ! ಜೀವಂತವಾಗಿರುವ ಮಗು ನನ್ನದು. ಸತ್ತಿರುವ ಮಗು ನಿನ್ನದು!” ಎಂದು ಹೇಳಿದಳು. ಆದರೆ ಮೊದಲನೆಯ ಸ್ತ್ರೀಯು, “ಇಲ್ಲ! ನೀನು ಸುಳ್ಳು ಹೇಳುತ್ತಿರುವೆ! ಸತ್ತಿರುವ ಮಗು ನಿನ್ನದು. ಜೀವಂತವಾಗಿರುವ ಮಗು ನನ್ನದು!” ಎಂದು ಹೇಳಿದಳು. ಹೀಗೆ ಆ ಇಬ್ಬರು ಸ್ತ್ರೀಯರು ರಾಜನ ಎದುರಿನಲ್ಲಿ ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗನು ಸತ್ತಿರುವವನು ನಿನ್ನ ಮಗನು” ಎಂದು ನುಡಿದಳು. ಮೊದಲನೆಯವಳು ತಿರುಗಿ, “ಅಲ್ಲ, ಸತ್ತಿರುವವನು ನಿನ್ನ ಮಗನು, ಬದುಕಿರುವವನು ನನ್ನ ಮಗನು” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗ; ಸತ್ತಿರುವವನು ನಿನ್ನ ಮಗ,” ಎಂದು ನುಡಿದಳು. ಮೊದಲನೆಯವಳು ಮತ್ತೆ, “ಇಲ್ಲ ಸತ್ತಿರುವವನು ನಿನ್ನ ಮಗ ಬದುಕಿರುವವನು ನನ್ನ ಮಗ,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಎರಡನೆಯವಳು - ಹಾಗಲ್ಲ, ಬದುಕಿರುವವನು ನನ್ನ ಮಗನು; ಸತ್ತಿರುವವನು ನಿನ್ನ ಮಗನು ಎಂದು ನುಡಿದಳು. ಮೊದಲನೆಯವಳು ತಿರಿಗಿ - ಅಲ್ಲ, ಸತ್ತಿರುವವನು ನಿನ್ನ ಮಗನು; ಬದುಕಿರುವವನು ನನ್ನ ಮಗನು ಅಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಆ ಬೇರೆ ಹೆಣ್ಣು ಮಗಳು, “ಇಲ್ಲ ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,” ಎಂದಳು. ಮೊದಲನೆಯವಳು, “ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:22
2 ತಿಳಿವುಗಳ ಹೋಲಿಕೆ  

ಮುಂಜಾನೆ ನಾನು ಎಚ್ಚರಗೊಂಡು ನನ್ನ ಮಗುವಿಗೆ ಹಾಲು ಕುಡಿಸಲು ಸಿದ್ಧಳಾದಾಗ ಮಗು ಸತ್ತುಹೋಗಿರುವುದನ್ನು ಕಂಡೆನು. ಆ ಮಗುವನ್ನು ನಾನು ಸೂಕ್ಷ್ಮವಾಗಿ ನೋಡಿದಾಗ ಆ ಮಗು ನನ್ನದಲ್ಲವೆಂಬುದು ನನಗೆ ತಿಳಿಯಿತು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು