Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:26 - ಪರಿಶುದ್ದ ಬೈಬಲ್‌

26 ಆಗ ಎರಡನೆಯ ಸ್ತ್ರೀಯು, “ಈಗ ಸರಿಹೋಯಿತು. ಮಗುವನ್ನು ಎರಡು ಹೋಳುಮಾಡಿ. ಆಗ ನಮ್ಮಿಬ್ಬರಿಗೂ ಅವನಿರುವುದಿಲ್ಲ” ಎಂದಳು. ಆದರೆ ಮೊದಲನೆಯ ಸ್ತ್ರೀಯು, ಅಂದರೆ, ತನ್ನ ಮಗುವಿನ ಮೇಲೆ ತುಂಬಾ ಪ್ರೀತಿಯನ್ನಿಟ್ಟಿದ ನಿಜವಾದ ತಾಯಿಯು ರಾಜನಿಗೆ, “ದಯವಿಟ್ಟು ಆ ಮಗುವನ್ನು ಕೊಲ್ಲಬೇಡಿ ಸ್ವಾಮಿ! ಅವಳಿಗೇ ಕೊಟ್ಟುಬಿಡಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರುಳುಮರುಗಿ - ನನ್ನ ಒಡೆಯಾ, ಬೇಡ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡು; ಅದನ್ನು ಕೊಲ್ಲಿಸಬೇಡ ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು - ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು. ಆದರೆ, ಮತ್ತೊಬ್ಬಳು, ಅದು ನನಗಾಗಲಿ ನಿನಗಾಗಲಿ ಆಗಿರಬಾರದು, ಕಡಿಯಿರಿ. ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:26
12 ತಿಳಿವುಗಳ ಹೋಲಿಕೆ  

ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.


ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.


“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ?


ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.


ಇತರರನ್ನು ಪ್ರೀತಿಸದವರಾಗಿರುತ್ತಾರೆ; ಕ್ಷಮಿಸದವರಾಗಿರುತ್ತಾರೆ; ದೂಷಿಸುವವರಾಗಿರುತ್ತಾರೆ. ತಮ್ಮ ಮೇಲೆ ತಮಗೇ ಹತೋಟಿಯಿಲ್ಲದವರಾಗಿರುತ್ತಾರೆ; ಉತ್ತಮವಾದದ್ದನ್ನು ದ್ವೇಷಿಸುವವರಾಗಿರುತ್ತಾರೆ; ಕೋಪಿಷ್ಠರಾಗಿರುತ್ತಾರೆ; ಸಂಕುಚಿತ ಗುಣವುಳ್ಳವರಾಗಿರುತ್ತಾರೆ.


ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.


ನಾನು ಬಹುಕೋಪಗೊಂಡಿದ್ದೆ. ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. ಆಗ ನಾನು ಬಾಯಿತೆರೆದು,


ಜೀವಂತವಾಗಿರುವ ಮಗುವನ್ನು ಕತ್ತರಿಸಿ ಅವರಿಬ್ಬರಿಗೂ ಅರ್ಧರ್ಧ ಮಗುವನ್ನು ಕೊಟ್ಟುಬಿಡಿ” ಎಂದು ಆಜ್ಞಾಪಿಸಿದನು.


ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು