1 ಅರಸುಗಳು 3:3 - ಪರಿಶುದ್ದ ಬೈಬಲ್3 ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.