Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:7 - ಪರಿಶುದ್ದ ಬೈಬಲ್‌

7 ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇವಿುಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:7
21 ತಿಳಿವುಗಳ ಹೋಲಿಕೆ  

ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.


ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು.


ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ಆದರೆ ಇಸ್ರೇಲಿನ ಮತ್ತು ಯೆಹೂದದ ಜನರೆಲ್ಲ ದಾವೀದನನ್ನು ಪ್ರೀತಿಸಿದರು. ಅವನು ಯುದ್ಧದಲ್ಲಿ ಅವರನ್ನು ಮುನ್ನಡೆಸಿದ್ದರಿಂದ ಮತ್ತು ಅವರಿಗೋಸ್ಕರ ಹೋರಾಡಿದ್ದರಿಂದ ಅವರು ಅವನನ್ನು ಬಹಳವಾಗಿ ಪ್ರೀತಿಸಿದರು.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.


ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.


ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು