Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:11 - ಪರಿಶುದ್ದ ಬೈಬಲ್‌

11 ನಾಫೋತ್ ದೋರ್‌ಗೆ ಬೆನ್‌ಅಬೀನಾದಾಬನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೋರ್‍ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗನು; ಸೊಲೊಮೋನನ ಮಗಳಾದ ಟಾಫತಳು ಇವನ ಹೆಂಡತಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬೆನ್ ಅಬೀನಾದಾಬ್ ನಾಫೋತ್ ದೋರ್‌ದಲ್ಲಿ ಅಧಿಕಾರಿ. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:11
9 ತಿಳಿವುಗಳ ಹೋಲಿಕೆ  

ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮದಿಕ್ಕಿನ ನೆಫತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು.


ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.


ದೋರ್ ಬೆಟ್ಟದ ಮೇಲಿರುವ ದೋರಿನ ಅರಸ ಗಿಲ್ಗಾಲದಲ್ಲಿಯ ಗೋಯಿಮ್‌ನ ಅರಸ


ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.


ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.


ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.


ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.


ಅನಂತರ ಇಷಯನು ಶಮ್ಮನನ್ನು ಸಮುವೇಲನ ಬಳಿಗೆ ಕಳುಹಿಸಿದನು. ಆದರೆ ಸಮುವೇಲನು, “ಯೆಹೋವನು ಇವನನ್ನೂ ಆರಿಸಲಿಲ್ಲ” ಎಂದನು.


ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು