12 ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.
12 ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.
ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.
ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದ್ದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೆತಾನ್‌ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು.
ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.