1 ಅರಸುಗಳು 4:13 - ಪರಿಶುದ್ದ ಬೈಬಲ್13 ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿ |