Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:20 - ಪರಿಶುದ್ದ ಬೈಬಲ್‌

20 ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:20
20 ತಿಳಿವುಗಳ ಹೋಲಿಕೆ  

ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”


ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.


ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.


ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.


ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.


ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.


ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.


ಈಜಿಪ್ಟಿನವನು ದಾವೀದನನ್ನು ಅಮಾಲೇಕ್ಯರ ಬಳಿಗೆ ಕರೆದುಕೊಂಡು ಹೋದನು. ಅವರು ತಿನ್ನುತ್ತಾ ಕುಡಿಯುತ್ತಾ ಸುತ್ತುವರಿದು ನೆಲದ ಮೇಲೆ ಬಿದ್ದಿದ್ದರು. ಫಿಲಿಷ್ಟಿಯರ ಮತ್ತು ಯೆಹೂದ್ಯರ ದೇಶದಿಂದ ಸೂರೆಮಾಡಿದ ವಸ್ತುಗಳಿಂದ ಸಂಭ್ರಮವನ್ನು ಆಚರಿಸುತ್ತಿದ್ದರು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.


ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: “‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.


ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು