Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:21 - ಪರಿಶುದ್ದ ಬೈಬಲ್‌

21 ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:21
22 ತಿಳಿವುಗಳ ಹೋಲಿಕೆ  

ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಅರಣ್ಯ ಮತ್ತು ಲೆಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿಕೊಳ್ಳುವುದು.


ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು.


ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.


ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರೆಲ್ಲರು ಅವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಆದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು.


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ನೀನು ಕೇಳದೆಹೋದ ಬಿನ್ನಹಗಳನ್ನು ನಾನು ನಿನಗೆ ಅನುಗ್ರಹಿಸುತ್ತೇನೆ. ನಿನ್ನ ಜೀವವಿರುವವರೆಗೆ ನೀನು ಶ್ರೀಮಂತನಾಗಿದ್ದು ಘನಮಾನವನ್ನು ಹೊಂದುವಿ. ಪ್ರಪಂಚದಲ್ಲಿ ನಿನ್ನಂತಹ ಉನ್ನತವಾದ ಬೇರೊಬ್ಬ ರಾಜನು ಇರುವುದಿಲ್ಲ.


ಪ್ರತಿದಿನವೂ ಸೊಲೊಮೋನನಿಗೆ ಮತ್ತು ಅವನ ಪಂಕ್ತಿಯಲ್ಲಿ ಊಟಮಾಡುವವರಿಗೆ ಬೇಕಾದ ಆಹಾರಪದಾರ್ಥಗಳು ಹೀಗಿವೆ: ನೂರೈವತ್ತು ಬುಷೆಲ್ಸ್ ಉತ್ತಮವಾದ ಗೋಧಿಯ ಹಿಟ್ಟು; ಮುನ್ನೂರು ಬುಷೆಲ್ಸ್ ಹಿಟ್ಟು; ಚೆನ್ನಾಗಿ ಮೇಯಿಸಿದ ಹತ್ತು ಹಸುಗಳು; ಹೊಲಗಳಲ್ಲಿ ಮೇಯಿಸಿದ ಇಪ್ಪತ್ತು ಹಸುಗಳು; ನೂರು ಕುರಿಗಳು; ಇವುಗಳಲ್ಲದೆ ದುಪ್ಪಿ, ಜಿಂಕೆ, ಸಾರಂಗ ಮತ್ತು ಕೊಬ್ಬಿದ ಕೋಳಿಗಳು.


“ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು