1 ಅರಸುಗಳು 4:22 - ಪರಿಶುದ್ದ ಬೈಬಲ್22-23 ಪ್ರತಿದಿನವೂ ಸೊಲೊಮೋನನಿಗೆ ಮತ್ತು ಅವನ ಪಂಕ್ತಿಯಲ್ಲಿ ಊಟಮಾಡುವವರಿಗೆ ಬೇಕಾದ ಆಹಾರಪದಾರ್ಥಗಳು ಹೀಗಿವೆ: ನೂರೈವತ್ತು ಬುಷೆಲ್ಸ್ ಉತ್ತಮವಾದ ಗೋಧಿಯ ಹಿಟ್ಟು; ಮುನ್ನೂರು ಬುಷೆಲ್ಸ್ ಹಿಟ್ಟು; ಚೆನ್ನಾಗಿ ಮೇಯಿಸಿದ ಹತ್ತು ಹಸುಗಳು; ಹೊಲಗಳಲ್ಲಿ ಮೇಯಿಸಿದ ಇಪ್ಪತ್ತು ಹಸುಗಳು; ನೂರು ಕುರಿಗಳು; ಇವುಗಳಲ್ಲದೆ ದುಪ್ಪಿ, ಜಿಂಕೆ, ಸಾರಂಗ ಮತ್ತು ಕೊಬ್ಬಿದ ಕೋಳಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗಿದ್ದ ಆಹಾರಪದಾರ್ಥಗಳ ಪಟ್ಟಿ: ಐದು ಸಾವಿರ ಲೀಟರ್ ಗೋದಿಯ ಹಿಟ್ಟು, ಹತ್ತು ಸಾವಿರ ಲೀಟರ್ ಜವೆಗೋದಿಯ ಹಿಟ್ಟು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗುವ ಆಹಾರಪದಾರ್ಥಗಳು - ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆ ಗೋದಿಯ ಹಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸೊಲೊಮೋನನು ಒಂದು ದಿನದ ಭೋಜನಕ್ಕೆ ಕೊಡುತ್ತಿದ್ದ ಆಹಾರ ಪದಾರ್ಥಗಳು 5,000 ಕಿಲೋಗ್ರಾಂ ನಯವಾದ ಗೋಧಿಯ ಹಿಟ್ಟು, 10,000 ಕಿಲೋಗ್ರಾಂ ಜವೆಗೋಧಿ, ಅಧ್ಯಾಯವನ್ನು ನೋಡಿ |
ಪ್ರತಿದಿನ ನಮ್ಮ ಊಟಕ್ಕಾಗಿ ಒಂದು ಹೋರಿಯನ್ನು, ಆರು ಕೊಬ್ಬಿದ ಕುರಿಗಳನ್ನು ಮತ್ತು ಅನೇಕ ಕೋಳಿಗಳನ್ನು ಕೊಯ್ಯಲಾಗುತ್ತಿತ್ತು; ಹತ್ತುದಿನಕ್ಕೊಮ್ಮೆ ವಿವಿಧ ರೀತಿಯ ದ್ರಾಕ್ಷಾರಸವನ್ನು ಒದಗಿಸಿಕೊಡುತ್ತಿದ್ದೆನು. ಆದರೂ ರಾಜ್ಯಪಾಲನಿಗೆ ಸಲ್ಲಬೇಕಾಗಿದ್ದ ಆಹಾರಪದಾರ್ಥಗಳನ್ನು ನಾನೆಂದೂ ಕೇಳಲಿಲ್ಲ; ಅದಕ್ಕಾಗಿ ಜನರಿಂದ ತೆರಿಗೆ ತೆಗೆದುಕೊಳ್ಳಲಿಲ್ಲ. ಯಾಕೆಂದರೆ ನನ್ನ ಜನರು ಮಾಡುವ ಕೆಲಸವು ತುಂಬಾ ಪ್ರಯಾಸಕರವಾದದ್ದೆಂದು ನನಗೆ ಗೊತ್ತಿತ್ತು.
“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.