Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:25 - ಪರಿಶುದ್ದ ಬೈಬಲ್‌

25 ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:25
14 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”


ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: “‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಬ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್‌ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.


“ನನ್ನ ಸಲಹೆ ಹೀಗಿದೆ: ನೀನು ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲರನ್ನೆಲ್ಲ ಒಟ್ಟುಗೂಡಿಸು. ಆಗ ಸಮುದ್ರ ತೀರದ ಮರಳಿನ ಕಣಗಳಂತೆ ಅಲ್ಲಿ ಅನೇಕ ಜನರಿರುತ್ತಾರೆ. ನೀನೇ ಸ್ವತಃ ಯುದ್ಧರಂಗಕ್ಕೆ ಹೋಗಬೇಕು.


ಸಮುವೇಲನು ಯೆಹೋವನ ನಿಜಪ್ರವಾದಿಯೆಂಬುದು ದಾನಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು.


ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


“‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.


ಆ ಜನರು ತಮಗೊದಗಿದ ಅವಮಾನವನ್ನೂ ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸ್ವದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು