Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:27 - ಪರಿಶುದ್ದ ಬೈಬಲ್‌

27 ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮೇಲೆ ಹೇಳಿದ ಜಿಲ್ಲಾಧಿಕಾರಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುತ್ತಿದ್ದ ಎಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೇಲೆ ಕಂಡ ಪ್ರದೇಶಾಧಿಪತಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕೂತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಅಧಿಪತಿಗಳು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೋಸ್ಕರವೂ, ಅರಸನ ಮೇಜಿಗೆ ಬರುವವರೆಲ್ಲರಿಗೋಸ್ಕರವೂ ಸಿದ್ಧಮಾಡಿದ್ದರು. ಅವರಿಗೆ ಕೊರತೆಯಾದದ್ದು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:27
4 ತಿಳಿವುಗಳ ಹೋಲಿಕೆ  

ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು.


ರಾಜನ ರಥಗಳ ಕುದುರೆಗಳಿಗೆ ಮತ್ತು ಸವಾರಿಯ ಕುದುರೆಗಳಿಗೆ ಬೇಕಾದ ಹುಲ್ಲನ್ನು ಮತ್ತು ಬಾರ್ಲಿಯನ್ನು ಈ ರಾಜ್ಯಪಾಲರುಗಳು ಆಯಾಸ್ಥಳಗಳಿಂದ ತಂದುಕೊಡುತ್ತಿದ್ದರು.


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಪುರುಷರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು