Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:33 - ಪರಿಶುದ್ದ ಬೈಬಲ್‌

33 ಸೊಲೊಮೋನನು ಪ್ರಕೃತಿಯ ಬಗ್ಗೆಯೂ ಹೆಚ್ಚಾಗಿ ತಿಳಿದುಕೊಂಡನು. ಸೊಲೊಮೋನನು ಲೆಬನೋನಿನ ದೇವದಾರು ವೃಕ್ಷಗಳಿಂದ ಮೊದಲುಗೊಂಡು ಗೋಡೆಗಳಲ್ಲಿ ಬೆಳೆಯುವ ಗಿಡಗಳವರೆಗೆ, ವಿವಿಧ ರೀತಿಯ ಸಸ್ಯಗಳ ಬಗ್ಗೆ ಪ್ರಸ್ತಾಪಿಸಿದನು. ರಾಜನಾದ ಸೊಲೊಮೋನನು ಪ್ರಾಣಿಗಳ, ಪಕ್ಷಿಗಳ ಮತ್ತು ಹರಿದಾಡುವ ಜಂತುಗಳ ಬಗ್ಗೆಯೂ ಪ್ರಸ್ತಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನು, ಲೆಬನೋನಿನ ದೇವದಾರುವೃಕ್ಷ ಮೊದಲ್ಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನು ಕುರಿತು, ಎಲ್ಲಾ ಪಶುಪಕ್ಷಿ, ಜಲಜಂತು, ಕ್ರಿಮಿಕೀಟಗಳನ್ನು ಕುರಿತು ಪ್ರಸ್ತಾಪಿಸಬಲ್ಲವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಲೆಬನೋನಿನ ದೇವದಾರುವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ ಎಲ್ಲಾ ಪಶುಪಕ್ಷಿಜಲಜಂತು ಕ್ರಿವಿುಕೀಟಗಳನ್ನೂ ಕುರಿತು ಪ್ರಸ್ತಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನವರೆಗೂ ಹೇಳಿದನು. ಇದಲ್ಲದೆ ಮೃಗಗಳನ್ನು ಕುರಿತೂ, ಪಕ್ಷಿಗಳನ್ನು ಕುರಿತೂ, ಕ್ರಿಮಿಗಳನ್ನು ಕುರಿತೂ, ಮೀನುಗಳನ್ನು ಕುರಿತೂ ಪ್ರಸ್ತಾಪಿಸಬಲ್ಲವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:33
13 ತಿಳಿವುಗಳ ಹೋಲಿಕೆ  

ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ, ‘ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತಗಿರಿಗಳಿಗೆ ಬಂದೆನು. ನಾನು ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿಮರಗಳನ್ನೂ ಕಡಿದುರುಳಿಸಿದೆನು.


ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.


ನಿಮ್ಮ ಗುಡಾರಗಳು ಕಣಿವೆಗಳಂತೆ ಹರಡಿಕೊಂಡಿವೆ. ನಿಮ್ಮ ಗುಡಾರಗಳು ನದಿಯ ಬಳಿಯಿರುವ ತೋಟಗಳಂತಿವೆ. ನಿಮ್ಮ ಗುಡಾರಗಳು ಯೆಹೋವನು ನೆಟ್ಟ ಸುವಾಸನೆಯ ಪೊದೆಗಳಂತೆಯೂ ನೀರಿನ ಬಳಿಯಿರುವ ದೇವದಾರಿನ ಮರಗಳಂತೆಯೂ ಇವೆ.


ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.


ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.


ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.


ರಾಜನಾದ ಸೊಲೊಮೋನನು ತನ್ನ ಜೀವಿತದ ಅವಧಿಯಲ್ಲಿ ಮೂರುಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು.


ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.


ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!


ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು